ಪ್ರಾಸಿಕ್ಯೂಷನ್ ಗೆ ಅನುಮತಿ, ರಾಜೀನಾಮೆ ಪ್ರಶ್ನೆಯೇ ಇಲ್ಲ-ಸಿದ್ದರಾಮಯ್ಯ; ರಾಜ್ಯಪಾಲರ ವಿರುದ್ಧ ಪ್ರತಿಭಟನೆ; ನಮ್ಮ ಮೆಟ್ರೋ 3 ನೇ ಹಂತದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ
ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಂ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಲು ಮನವಿ ಮಾಡಿದ್ದರು.