ಬೆಳಗಾವಿಯಲ್ಲಿ ಪಂಚಮಸಾಲಿ ಪ್ರತಿಭಟನೆಗೆ ನಿರ್ಬಂಧ ಹೇರಿರುವ ಸಿಎಂ ಸಿದ್ದರಾಮಯ್ಯ ಸರ್ಕಾರವನ್ನು ಬಿಜೆಪಿ ಶಾಸಕರು "ಹಿಟ್ಲರ್ ಸರ್ಕಾರ" ಎಂದು ತರಾಟೆಗೆ ತೆಗೆದುಕೊಂಡರು.
ಡಿಸೆಂಬರ್ 10 ರಂದು ಬೆಳಗಾವಿಯಲ್ಲಿ ಆಯೋಜಿಸಿದ್ದ ಪಂಚಮಸಾಲಿ ಸಮುದಾಯದ ಪ್ರತಿಭಟನೆಗೆ #ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಬಂಧಗಳನ್ನು ಹೇರಿದ್ದಕ್ಕಾಗಿ ವಿರೋಧ ಪಕ್ಷದ ಬಿಜೆಪಿ ಶಾಸಕರು ಟೀಕಿಸಿದರು.
‘ಹಿಟ್ಲರ್ ಸರ್ಕಾರ’ ಎಂಬ ಘೋಷಣೆ ಕೂಗಿಕೊಂಡು ಚಳಿಗಾಲದ ಅಧಿವೇಶನದ ಮೊದಲ ದಿನವೇ ವಿಧಾನಸಭೆಯ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.