ಸಂಧ್ಯಾ ಥಿಯೇಟರ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಬಂಧಿಸಿದ್ದಾರೆ.
ಅಲ್ಲು ಅರ್ಜುನ್ ರನ್ನು ವಶಕ್ಕೆ ಪಡೆದ ಪೊಲೀಸರು ನಂತರ ನಟನಿಗೆ ವೈದ್ಯಕೀಯ ಪರೀಕ್ಷೆ ಮಾಡಿಸಿ ನಾಂಪಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಇದೀಗ ಕೋರ್ಟ್ ಅಲ್ಲು ಅರ್ಜುನ್ ಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಈಮಧ್ಯೆ, ಅಲ್ಲು ಅರ್ಜುನ್ ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.