ವಕ್ಫ್ ಅತಿಕ್ರಮಣದ ಬಗ್ಗೆ ಮಾತನಾಡದಿರಲು ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿಗೆ ಬಿ.ವೈ ವಿಜಯೇಂದ್ರ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಸಚಿವ ಪ್ರಿಯಾಂಕ ಖರ್ಗೆಯವರ ಮಾತು ವಿಧಾನಸಭೆಯಲ್ಲಿಂದು ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ವಾಗ್ಯುದ್ದಗಳಿಗೆ ಕಾರಣವಾಗಿತ್ತು.