ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು.
ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ತುರ್ತು ಚಿಕಿತ್ಸಾ ವಿಭಾಗಕ್ಕೆ ದಾಖಲಿಸಲಾಗಿತ್ತು.
ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲಾ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ. ವಿಡಿಯೋ ಇಲ್ಲಿದೆ ನೋಡಿ.