ದೇಶಾದ್ಯಂತ ಇಂದಿನಿಂದ ಹೊಸ ಕ್ರಿಮಿನಲ್ ಕಾನೂನು ಜಾರಿಗೆ ಬಂದಿವೆ. ಹೊಸ ಕಾಯ್ದೆಗಳ ಜಾರಿ ಬಗ್ಗೆ ರಾಜ್ಯ ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಇಂದಿನಿಂದ ದಾಖಲಾಗುವ ಪ್ರಕರಣಗಳಿಗೆ ಹೊಸ ಕಾನೂನುಗಳು ಅನ್ವಯವಾಗಲಿದೆ ಎಂದು ತಿಳಿಸಿದ್ದಾರೆ. ಹೊಸ ಕಾನೂನುಗಳ ಬಗ್ಗೆ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ. ಪೊಲೀಸರಿಗಾಗಿ ಹೊಸದಾಗಿ ಮೊಬೈಲ್ ಅಪ್ಲಿಕೇಷನ್ ಸಿದ್ಧಪಡಿಸಲಾಗಿದೆ. ಪೊಲೀಸರಿಗೆ ಹೊಸ ಕಾನೂನುಗಳ ಪ್ರಕಾರ ಕೆಲಸ ಮಾಡುವುದು ಹೊಂದಿಕೆಯಾಗುವವರೆಗೂ ಆ್ಯಪ್ ನೋಡಿಕೊಂಡು ಕೆಲಸ ಮಾಡಲು ಸಹಾಯವಾಗಲಿದೆ ಎಂದು ತಿಳಿಸಿದ್ದಾರೆ. News Bulletin Video 01-07-2024