ಅಸ್ಸಾಂನಲ್ಲಿ ಸುರಿದ ಸತತ ಭಾರಿ ಮಳೆಯಿಂದಾಗಿ ಅಲ್ಲಿ ಪ್ರವಾಹದ ಪರಿಸ್ಥಿತಿ ಮತ್ತಷ್ಟು ತೀವ್ರಗೊಂಡಿದ್ದು, ರಾಜ್ಯದ ಬರೊಬ್ಬರಿ 29 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ. ಪ್ರಮುಖ ನದಿಗಳಾದ ಬ್ರಹ್ಮಪುತ್ರ, ದಿಗಾರೂ ಮತ್ತು ಕೊಲೊಂಗ್ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ.