ನರೇಂದ್ರ ಮೋದಿಗೆ ರಷ್ಯಾದ ಅತ್ಯುನ್ನತ ನಾಗರಿಕ ಗೌರವ; ಭಾರತೀಯರಿಗೆ ಅರ್ಪಿಸಿದ ಪ್ರಧಾನಿ
ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ರಷ್ಯಾ ರಾಜಧಾನಿ ಮಾಸ್ಕೋದ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ 2019ನೇ ಸಾಲಿನ ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್ ದಿ ಫಸ್ಟ್-ಕಾಲ್ಡ್ ಪ್ರಶಸ್ತಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಂದು ವಿಧ್ಯುಕ್ತವಾಗಿ ನೀಡಲಾಯಿತು.