ಎರಡು ವರ್ಷಗಳ ನಂತರ ಭರ್ತಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ಎಸ್ ಜಲಾಶಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿಗಳಿಗೆ, ಡಿಸಿಎಂ ಡಿಕೆ ಶಿವಕುಮಾರ್, ಸಚಿವರಾದ ಚಲುವರಾಯಸ್ವಾಮಿ ಎಚ್.ಸಿ ಮಹದೇವಪ್ಪ, ವೆಂಕಟೇಶ್ ಸೇರಿ ಸೇರಿದಂತೆ ಹಳೇ ಮೈಸೂರು ಭಾಗದ ಸಚಿವರು, ಶಾಸಕರು ಉಪಸ್ಥಿತರಿದ್ದರು.