Bengaluru rave party: ತೆಲುಗು ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವನೆ ಪರೀಕ್ಷೆ ಪಾಸಿಟಿವ್!
ಇತ್ತೀಚೆಗೆ ಬೆಂಗಳೂರು ಹೊರ ವಲಯದ ಫಾರ್ಮ್‌ಹೌಸ್‌ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಭಾಗವಹಿಸಿದ್ದವರ ರಕ್ತದ ಮಾದರಿಗಳ ಫಲಿತಾಂಶ ಬಂದಿದ್ದು, ತೆಲುಗು ಚಿತ್ರರಂಗದ ನಟಿ ಸೇರಿದಂತೆ 86 ಮಂದಿ ಮಾದಕ ದ್ರವ್ಯ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸ್ ಮೂಲಗಳು ಗುರುವಾರ ತಿಳಿಸಿವೆ.