ದೆಹಲಿಯಿಂದ ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಕೂಡಲೇ ಎಚ್ಚೆತ್ತ ಸಿಬ್ಬಂದಿ ಪ್ರಯಾಣಿಕರ ರಕ್ಷಣೆ ಮಾಡಿದ್ದಾರೆ. ವಿಚಾರ ತಿಳಿಯುತ್ತಲೇ ಸಿಬ್ಬಂದಿ ವಿಮಾನದ ಪ್ರಧಾನ ಬಾಗಿಲು ಮತ್ತು ತುರ್ತು ಬಾಗಿಲುಗಳನ್ನು ತೆರೆದು ಪ್ರಯಾಣಿಕರನ್ನು ರಕ್ಷಣೆ ಮಾಡುವ ಸಾಹಸ ಮಾಡಿದ್ದಾರೆ.