ಪಪುವಾ ನ್ಯೂಗಿನಿಯಾದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ಭೂಕುಸಿತದಲ್ಲಿ 2 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಪಪುವಾ ನ್ಯೂಗಿನಿಯಾದ ಎಂಗಾ ಪ್ರಾಂತ್ಯದಲ್ಲಿ ಭೂಕುಸಿತ ಸಂಭವಿಸಿದ್ದು, ಈ ದುರಂತದಲ್ಲಿ ಕನಿಷ್ಠ 2000 ಕ್ಕೂ ಹೆಚ್ಚು ಜನರು ಜೀವಂತವಾಗಿ ಸಮಾಧಿಯಾಗಿದ್ದಾರೆ.