ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಒಂದು ದಿನ ಬಾಕಿ ಇದೆ. ಈಮಧ್ಯೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತದಾರರಿಗೆ ಹಣ ಹಂಚಿದ ಆರೋಪ ಕೇಳಿಬಂದಿದೆ.
ಪಾಲ್ಗರ್ ಜಿಲ್ಲೆಯ ವಿಧಾನಸಭಾ ಕ್ಷೇತ್ರವೊಂದರ ಮತದಾರರಿಗೆ ತಾವ್ಡೆ ಹಣ ಹಂಚಿದ್ದಾರೆ ಎಂದು ಬಹುಜನ ವಿಕಾಸ್ ಆಘಾಡಿ ನಾಯಕ ಹಿತೇಂದ್ರ ಠಾಕೂರ್ ಮಂಗಳವಾರ ಹೇಳಿದ್ದಾರೆ.
ತಾವ್ಡೆ ಮತ್ತು ಬಹುಜನ ವಿಕಾಸ್ ಆಘಾಡಿ ನಾಯಕರು, ಕಾರ್ಯಕರ್ತರ ನಡುವಿನ ಆರೋಪ, ವಾಗ್ವಾದದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.