ವಕ್ಫ್ ನೋಟಿಸ್ಗಳ ವಿರುದ್ಧ ಸಿಡಿದೆದ್ದಿರುವ ಬಿಜೆಪಿ ಕರ್ನಾಟಕದಾದ್ಯಂತ ನಮ್ಮ ಭೂಮಿ, ನಮ್ಮ ಹಕ್ಕು ಘೋಷಣೆಯಡಿ ಪ್ರತಿಭಟನೆ ನಡೆಸಿತು. ಕೋಲಾರದಿಂದ ಮಂಗಳೂರಿನವರೆಗೆ, ಬೆಂಗಳೂರಿನಿಂದ ವಿಜಯಪುರದವರೆಗ ವಕ್ಫ್ ವಿವಾದ ವಿರೋಧಿಸಿ ಪ್ರತಿಭಟನೆಗಿಳಿದಿದೆ. ಕೂಡಲೇ ಗೆಜೆಟ್ ನೋಟಿಫಿಕೇಷನ್ ರದ್ದು ಮಾಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ.