ದಲಿತ ಮತ್ತು ಪರಿಶಿಷ್ಟ ಪಂಗಡದ ಮುಖಂಡರು ಕಾಂಗ್ರೆಸ್ ಹೈಕಮಾಂಡ್ ಭೇಟಿ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಜನರು ಅನಗತ್ಯವಾಗಿ ಊಹಾಪೋಹ ಸೃಷ್ಟಿಸುತ್ತಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಇದರಲ್ಲಿ ಊಹಾಪೋಹ ಸೃಷ್ಟಿಸುವ ಅಗತ್ಯ ಏನಿದೆ ಎಂದು ಸಿಎಂ ಪ್ರಶ್ನಿಸಿದ್ದಾರೆ.