3 ವರ್ಷಗಳ ಹಿಂದೆ ಮಹಾಮಳೆಗೆ ಜಲಾವೃತಗೊಂಡು ನಲುಗಿದ್ದ ಯಲಹಂಕದ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ ನಿವಾಸಿಗಳು ಮತ್ತೊಮ್ಮೆ ಅದೇ ಪರಿಸ್ಥಿತಿಗೆ ಸಿಲುಕಿದ್ದಾರೆ.
ಕಳೆದ 2 ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೇಂದ್ರೀಯ ವಿಹಾರ್ ಅಪಾರ್ಟ್‌ಮೆಂಟ್‌ಗಳು ಜಲಾವೃತಗೊಂಡಿದೆ.
ಮಳೆಯಿಂದ ಪರದಾಡುತ್ತಿರುವ ಜನರಿಗೆ ಅಗತ್ಯ ಸೇವೆಗಳನ್ನು ಬಳಸಲು ಬಿಬಿಎಂಪಿ ಟ್ಯ್ರಾಕ್ಟರ್ ಸೇವೆ ಪ್ರಾರಂಭಿಸಿದೆ.
ಅಪಾರ್ಟ್ಮೆಂಟ್ ನಿಂದ ನಿವಾಸಿಗಳು ಹೊರ ಬರಲು ಹಾಗೂ ಒಳ ಹೋಗಲು 2 ಟ್ರ್ಯಾಕ್ಟರ್ ಗಳ ವ್ಯವಸ್ಥೆ ಮಾಡಲಾಗಿದೆ.