ಮುಡಾ ಹಗರಣ: ಮತ್ತೊಂದು ತಲೆದಂಡ; ಕಾವೇರಿ 5 ನೇ ಹಂತದ ಯೋಜನೆಗೆ ಚಾಲನೆ; ಬೆಂಗಳೂರು ಮಳೆ: ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಜಲಪಾತ, ಭೂಕುಸಿತ!
ಕಾವೇರಿ 5 ನೇ ಹಂತದ ನೀರಿನ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್ ಬುಧವಾರ ಚಾಲನೆ ನೀಡಿದರು. ಈ ಯೋಜನೆಯ ಮೂಲಕ ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಕೆಯಾಗಲಿದೆ.