ವಿಮಾನಯಾನ ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಹಾಕುವ ದುಷ್ಕರ್ಮಿಗಳು ವಿಮಾನದಲ್ಲಿ ಪ್ರಯಾಣಿಸದಂತೆ ನಿಯಮಗಳಿಗೆ ತಿದ್ದುಪಡಿ ತರಲು ಸರ್ಕಾರ ಮುಂದಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕೆ ರಾಮಮೋಹನ್ ನಾಯ್ಡು ಸೋಮವಾರ ಹೇಳಿದ್ದಾರೆ.
ಅಕ್ಟೋಬರ್ 14 ರಿಂದ ಏಳು ದಿನಗಳಲ್ಲಿ ಸುಮಾರು 100 ವಿಮಾನಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ಎಲ್ಲಾ ಬೆದರಿಕೆಗಳು ಹುಸಿ ಎಂಬುದು ನಂತರ ದೃಢಪಟ್ಟಿವೆ.
ನಾಗರಿಕ ವಿಮಾನಯಾನ ಸುರಕ್ಷತೆ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಗ್ರಹ ಕಾಯ್ದೆ 1982 ಮತ್ತು ವಾಯುಯಾನ ಭದ್ರತಾ ನಿಯಮಗಳಿಗೆ ತಿದ್ದುಪಡಿ ತರಲು ಯೋಜಿಸಲಾಗಿದೆ.
ವಿಮಾನಗಳಿಗೆ ಬಾಂಬ್ ಬೆದರಿಕೆಯ ಪರಿಸ್ಥಿತಿಯ ಕುರಿತು ಗೃಹ ವ್ಯವಹಾರಗಳ ಸಚಿವಾಲಯದೊಂದಿಗೆ ನಾಗರಿಕ ವಿಮಾನಯಾ ಸುರಕ್ಷತೆ ಬ್ಯೂರೋ ನಿರಂತರವಾಗಿ ಸಂಪರ್ಕ ಹೊಂದಿದೆ ಎಂದು ತಿಳಿಸಿದರು.