ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸುರಂಗ ನಿರ್ಮಾಣ ಸ್ಥಳದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದಾರೆ.
ದಾಳಿಯಲ್ಲಿ ವೈದ್ಯ ಸೇರಿದಂತೆ ಏಳು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಂದೇರ್‌ಬಾಲ್‌ನ ಗುಂಡ್‌ನಲ್ಲಿ ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಮತ್ತು ಇತರ ಸಿಬ್ಬಂದಿ ಸಂಜೆ ತಮ್ಮ ಶಿಬಿರಕ್ಕೆ ಹಿಂದಿರುಗಿದಾಗ ಈ ದಾಳಿ ನಡೆಸಿದ್ದಾರೆ.
ಕಾರ್ಮಿಕರ ಗುಂಪಿನ ಮೇಲೆ ಕನಿಷ್ಠ ಇಬ್ಬರು ಭಯೋತ್ಪಾದಕರು ಗುಂಡು ಹಾರಿಸಿದರು ಎನ್ನಲಾಗಿದೆ. ಐದು ಜನರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.