ಬೆಂಗಳೂರಿನ ಬಾಬುಸಾಬ್ಪಾಳ್ಯದಲ್ಲಿ ಮಂಗಳವಾರ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಣ್ಣೂರು ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಕಟ್ಟಡದ ಮಾಲೀಕ ಭುವನ್ ರೆಡ್ಡಿ, ಗುತ್ತಿಗೆದಾರ ಮುನಿಯಪ್ಪ ಎಂಬುವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಕಟ್ಟಡ ಮಾಲೀಕ ಭುವನ್ ರೆಡ್ಡಿ ನಾಲ್ಕು ಮಹಡಿ ನಿರ್ಮಾಣಕ್ಕೆ ಅನುಮತಿ ಪಡೆದು, ಆರು ಮಹಡಿಯ ಕಟ್ಟಡ ಕಟ್ಟಿಸುತ್ತಿದ್ದ. ಇದರಿಂದ ಕಟ್ಟಡ ಕುಸಿದು ಬಿದ್ದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಮತ್ತೋರ್ವ ಕಾರ್ಮಿಕನ ಶವ ಹೊರಗೆ ತೆಗೆದಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ ಎಂಟಕ್ಕೆ ಏರಿಕೆಯಾಗಿದೆ. 13 ಜನ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.