ವಕ್ಫ್ ವಿವಾದ: ರೈತರನ್ನ ಒಕ್ಕಲೆಬ್ಬಿಸಲ್ಲ-CM; ಮರಗಳ ನಾಶ: ಟಾಕ್ಸಿಕ್ ತಂಡದ ವಿರುದ್ಧ ಅರಣ್ಯ ಸಚಿವ ಗರಂ; ಜಯನಗರ ಕ್ಷೇತ್ರಕ್ಕೆ ಅನುದಾನ ಕಡಿತಗೊಳಿಸಿದ ಡಿಸಿಎಂ!
ವಿಜಯಪುರ, ಯಾದಗಿರಿ ಮತ್ತು ಧಾರವಾಡ ಜಿಲ್ಲೆಯ ಕೆಲವು ರೈತರಿಗೆ ಅವರ ಆಸ್ತಿ ವಕ್ಫ್ ಆಸ್ತಿ ಎಂದು ನೋಟಿಸ್ ನೀಡಿರುವ ಬಗ್ಗೆ ಸಿಎಂ ಪ್ರತಿಕ್ರಿಯೆ ನೀಡಿದ್ದು ಯಾವುದೇ ರೈತರನ್ನು ಅವರ ಜಮೀನುಗಳಿಂದ ಒಕ್ಕಲೆಬ್ಬಿಸುವುದಿಲ್ಲ ಮತ್ತು ಅವರಿಗೆ ನೀಡಲಾದ ನೋಟಿಸ್ ಹಿಂಪಡೆಯಲಾಗುವುದು ಎಂದು ಹೇಳಿದ್ದಾರೆ.