ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಶುಕ್ರವಾರ ರಾತ್ರಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಪರಿಣಾಮ ಪರಿಸ್ಥಿತಿ ಪ್ರಕ್ಷುಬ್ಧವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈ ವರೆಗೂ 50 ಜನರನ್ನು ಪೊಲೀಸರು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು 6 ಎಫ್ಐಆರ್ ಗಳನ್ನು ಹಾಕಿದ್ದಾರೆ.