ಅಮೆರಿಕ ಮಾಜಿ ಅಧ್ಯಕ್ಷ, ಈ ಬಾರಿಯ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಮೇಲೆ ಫ್ಲೋರಿಡಾದ ವೆಸ್ಟ್ ಪಾಮ್ ಬೀಚ್‌ನಲ್ಲಿರುವ ಅವರ ಗಾಲ್ಫ್ ಕ್ಲಬ್‌ನಲ್ಲಿ ಭಾನುವಾರ ಮತ್ತೆ ಹತ್ಯೆ ದಾಳಿ ನಡೆಸಲಾಗಿದೆ.
ಒಂಬತ್ತು ವಾರಗಳ ಹಿಂದೆ ಡೊನಾಲ್ಡ್ ಟ್ರಂಪ್ ಅವರ ಮೇಲೆ ದಾಳಿ ನಡೆದಿತ್ತು. ಸ್ವಲ್ಪದರಲ್ಲೆ ಪ್ರಾಣಾಪಾಯದಿಂದ ಪಾರಾಗಿದ್ದರು. ಈ ಬಾರಿಯು ಅದೇ ರೀತಿ ಸುರಕ್ಷಿತವಾಗಿ ಆರೋಗ್ಯವಾಗಿ ಇದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಸಂಬಂಧ ಒಬ್ಬ ವ್ಯಕ್ತಿಯನ್ನು FBI ಬಂಧಿಸಿದೆ.
ಭಾನುವಾರ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಫ್ಲೋರಿಡಾ ಗಾಲ್ಫ್ ಕೋರ್ಸ್‌ನ ಗಡಿಯ ಬಳಿ ಎಕೆ-47 ಶೈಲಿಯ ರೈಫಲ್ ಹೊಂದಿದ್ದ ಗನ್‌ಮ್ಯಾನ್ ಮೇಲೆ ಯುಎಸ್ ಸೀಕ್ರೆಟ್ ಸರ್ವೀಸ್ ಏಜೆಂಟ್ ಗುಂಡು ಹಾರಿಸಿದೆ.
ನಂತರ 58 ವರ್ಷದ ರೌತ್ ಎಂಬಾತನನ್ನು ಬಂಧಿಸಲಾಗಿದೆ. ಎರಡು ಬ್ಯಾಕ್‌ಪ್ಯಾಕ್‌ಗಳು, ಗುರಿಗಾಗಿ ಬಳಸಲಾದ ಸ್ಕೋಪ್ ಮತ್ತು ಗೋಪ್ರೊ ಕ್ಯಾಮೆರಾದೊಂದಿಗೆ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.