ತಿರುಪತಿ ತಿರುಮಲದ ಪ್ರಸಿದ್ಧ ವೆಂಕಟೇಶ್ವರ ದೇವಾಲಯದ ಲಡ್ಡುವಿನಲ್ಲಿ ಪ್ರಾಣಿ ಜನ್ಯ ಕೊಬ್ಬಿನಾಂಶ ಬಳಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ದೇವಾಲಯದಲ್ಲಿ ಶಾಂತಿ ಹೋಮ, ಶುದ್ಧೀಕರಣ ಧಾರ್ಮಿಕ ಚಟುವಟಿಕೆಗಳು ಆರಂಭವಾಗಿವೆ.
ನಾಲ್ಕು ಗಂಟೆಗಳ ಕಾಲ ಶಾಂತಿಯ ಹೋಮ ಪಂಚಗವ್ಯ ಪ್ರೊಕ್ಷಣೆ ಶುದ್ದೀಕರಣ ಕಾರ್ಯ ನಡೆಸಲಾಗಿದೆ ಎಂದು ದೇವಾಲಯದ ಮೂಲಗಳು ತಿಳಿಸಿವೆ.