ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕರ್ನಾಟಕ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೈಕೋರ್ಟ್ ಹೇಳಿದೆ.