ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ವಕ್ಫ್ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಹಿಂಸಾಚಾರ ಭುಗಿಲೆದ್ದಿದೆ.
ಘಟನೆಗೆ ಸಂಬಂಧಿಸಿದಂತೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಏಪ್ರಿಲ್ 11, 202) ನಡೆದ ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು ಹಿಂಸಾಚಾರ ಮೆರೆದಿದ್ದಾರೆ. ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ಸಾರ್ವಜನಿಕ ಆಸ್ತಿಯನ್ನು ನಾಶಪಡಿಸಲಾಗಿದೆ. ಇದರಿಂದಾಗಿ ಪಶ್ಚಿಮ ಬಂಗಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.