ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಇಬ್ಬರು ಲಷ್ಕರ್-ಎ-ತೈಬಾ (ಎಲ್‌ಇಟಿ) ಭಯೋತ್ಪಾದಕರ ಮನೆಗಳನ್ನು ನಾಶಪಡಿಸಲಾಗಿದೆ.
ಗುರುವಾರ ರಾತ್ರಿ ನಡೆದ ಸ್ಫೋಟದಲ್ಲಿ ಮನೆಗಳು ನಾಶಪಡಿಸಲಾಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಭದ್ರತಾ ಪಡೆಗಳು ಇಬ್ಬರು ಎಲ್‌ಇಟಿ ಭಯೋತ್ಪಾದಕರಾದ ಆದಿಲ್ ಹುಸೇನ್ ಥೋಕರ್ ಮತ್ತು ಆಸಿಫ್ ಶೇಖ್ ಅವರ ಮನೆಗಳ ಒಳಗೆ ಶೋಧ ನಡೆಸುತ್ತಿದ್ದರು.
ಈ ವೇಳೆ ಮನೆಗಳಲ್ಲಿ ಇರಿಸಲಾಗಿದ್ದ ಸ್ಫೋಟಕಗಳು ಸ್ಫೋಟಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.