ಬೆಂಗಳೂರಿನ ಅರಕೆರೆಯ ಶಾಂತಿನಿಕೇತನ ಬಡಾವಣೆಯಲ್ಲಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕ ನಿಶ್ಚಿತ್‌ನನ್ನು (13) ಅಪಹರಿಸಿ ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಹುಳಿಮಾವು ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಗುರುಮೂರ್ತಿ ಹಾಗೂ ಗೋಪಾಲಕೃಷ್ಣ ಬಂಧಿತ ಆರೋಪಿಗಳು. ಇಬ್ಬರು ಆರೋಪಿಗಳು ಕಗ್ಗಲಿಪುರ ಅರಣ್ಯದಲ್ಲಿ ಅಡಗಿ ಕುಳಿತ್ತಿದ್ದರು.
ಖಚಿತ ಮಾಹಿತಿ ಆಧರಿಸಿ ಗುರುವಾರ ತಡರಾತ್ರಿ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.