ರಾಜ್ಯದ ನಾಲ್ಕು ರಸ್ತೆ ಸಾರಿಗೆ ನಿಗಮಗಳ (ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಕೆಕೆಆರ್‌ಟಿಸಿ) ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಇಂದಿನಿಂದ ರಾಜ್ಯಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದರಿಂದ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಕರ್ನಾಟಕದ ಸರ್ಕಾರಿ ಸ್ವಾಮ್ಯದ ಸಾರಿಗೆ ನಿಗಮಗಳ ನೌಕರರು ಮಂಗಳವಾರ ಬೆಳಿಗ್ಗೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿವೆ.
ಇದರಿಂದಾಗಿ ರಾಜ್ಯಾದ್ಯಂತ ಸಾರ್ವಜನಿಕ ಬಸ್ ಸೇವೆಗಳ ಮೇಲೆ ತೀವ್ರ ಪರಿಣಾಮ ಬೀರಿ ಪ್ರಯಾಣಿಕರು ಪರದಾಡಬೇಕಾಯಿತು. ವಿಡಿಯೋ ಇಲ್ಲಿದೆ ನೋಡಿ.