ಜಮ್ಮ-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಅಖಲ್‌ನ ಅರಣ್ಯ ಪ್ರದೇಶದಲ್ಲಿ ಉಗ್ರರೊಂದಿಗೆ ನಡೆಯುತ್ತಿರುವ 9ನೇ ದಿನದ ಎನ್‌ಕೌಂಟರ್‌ನಲ್ಲಿ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ.
ಇತ್ತೀಚಿನ ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳು ನಡೆಸಿದ ಅತಿ ಸುದೀರ್ಘ ಉಗ್ರ ವಿರೋಧಿ ಕಾರ್ಯಾಚರಣೆಗಳಲ್ಲಿ ಇದು ಒಂದಾಗಿದೆ.
ಹುತಾತ್ಮ ಸೈನಿಕರನ್ನು ಲ್ಯಾನ್ಸ್ ನಾಯಕ್ ಪ್ರೀತ್ಪಾಲ್ ಸಿಂಗ್ ಮತ್ತು ಸಿಪಾಯಿ ಹರ್ಮಿಂದರ್ ಸಿಂಗ್ ಎಂದು ಗುರುತಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.