ದೆಹಲಿ-ಎನ್‌ಸಿಆರ್‌ನಲ್ಲಿನ ಎಲ್ಲಾ ಬೀದಿ ನಾಯಿಗಳನ್ನು ಹಿಡಿದು, ಅವುಗಳನ್ನು ಆಶ್ರಯ ಕೇಂದ್ರಗಳಲ್ಲಿ ಇಡಬೇಕು ಎಂದು ಸೋಮವಾರ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿತ್ತು.
ಈ ಆದೇಶದ ವಿರುದ್ಧ ಸೋಮವಾರ ಇಂಡಿಯಾ ಗೇಟ್ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಪ್ರಾಣಿ ಹಕ್ಕುಗಳ ಕಾರ್ಯಕರ್ತರು, ರಕ್ಷಕರು, ಆರೈಕೆದಾರರು ಮತ್ತು ನಾಯಿ ಪ್ರಿಯರನ್ನು ಪೊಲೀಸರು ಬಂಧಿಸಿದ್ದಾರೆ.
ಇದೇ ವಿಷಯದ ಕುರಿತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮೇನಕಾ ಸಂಜಯ್ ಗಾಂಧಿ ಪ್ರತಿಕ್ರಿಯಿಸಿ, "ಆವೇಶದ ತೀರ್ಪುಗಳು ಎಂದಿಗೂ ಸಮಂಜಸವಲ್ಲ, ಸುಪ್ರೀಂ ಕೋರ್ಟ್ ಆದೇಶವನ್ನು 'ಅವಾಸ್ತವಿಕ' ಎಂದು ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.