ದಕ್ಷಿಣ ಬೆಂಗಳೂರು ಬಿಜೆಪಿ ಜಿಲ್ಲಾ ಘಟಕದ ವತಿಯಿಂದ ಸೋಮವಾರ 'ಧರ್ಮದ ಉಳಿವಿಗೆ ಧರ್ಮ ಯುದ್ಧ' ಎಂಬ ಶೀರ್ಷಿಕೆಯಡಿ 'ಧರ್ಮಸ್ಥಳ ಚಲೋ' ಯಾತ್ರೆ ಆರಂಭವಾಯಿತು.
ಜಯನಗರ ಶಾಸಕ ಸಿಕೆ ರಾಮಮೂರ್ತಿ ನೇತೃತ್ವದ ಯಾತ್ರೆಯು ಜಯನಗರ 4ನೇ ಬ್ಲಾಕ್‌ನಲ್ಲಿರುವ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪೂಜೆ ಸಲ್ಲಿಸುವ ಮೂಲಕ ಪ್ರಾರಂಭವಾಯಿತು.
ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಬಸವನಗುಡಿ ಶಾಸಕ ರವಿ ಸುಬ್ರಹ್ಮಣ್ಯ ಅವರು ಯಾತ್ರೆಗೆ ಚಾಲನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.