ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಗ್ಗಜಗ್ಗಾಟದ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಪಾಲ್ಗೊಂಡು ಉಭಯ ನಾಯಕರು ಒಗ್ಗಟ್ಟಿನ ಮಂತ್ರ ಜಪಿಸಿದ್ದರು. ಇದೀಗ ಡಿ.2ಕ್ಕೆ ತಮ್ಮ ನಿವಾಸಕ್ಕೆ ಉಪಹಾರಕ್ಕೆ ಬರುವಂತೆ ಡಿಸಿಎಂ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ ಎನ್ನಲಾಗಿದೆ.