ಭಾರತದಲ್ಲಿ ಮಾರಾಟವಾಗುವ ಎಲ್ಲಾ ಹೊಸ ಮೊಬೈಲ್ ಫೋನ್‌ಗಳಲ್ಲಿ ಸಂಚಾರ್ ಸಾಥಿ ಅಪ್ಲಿಕೇಶನ್‌ಗಳನ್ನು ಕಡ್ಡಾಯವಾಗಿ ಇನ್‌ಸ್ಟಾಲ್ ಮಾಡಲು ದೂರಸಂಪರ್ಕ ಇಲಾಖೆ ಹ್ಯಾಂಡ್‌ಸೆಟ್ ತಯಾರಕರಿಗೆ ಸೂಚಿಸಿದೆ.
ಆದರೆ ಈ ವಿಷಯ ವಿವಾದವಾಗಿ ಬದಲಾದ ಹಿನ್ನೆಲೆಯಲ್ಲಿ ಕೇಂದ್ರ ದೂರ ಸಂಪರ್ಕ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಮಂಗಳವಾರ ಮಹತ್ವದ ಮಾಹಿತಿ ನೀಡಿದ್ದಾರೆ.
ಬಳಕೆದಾರರು ಸಂಚಾರ್ ಸಾಥಿ ಆ್ಯಪ್ ನಿಮ್ಮ ಫೋನ್ ನಲ್ಲಿ ಇಟ್ಟುಕೊಳ್ಳಲು ಬಯಸದಿದ್ದರೆ, ನೀವು ಅದನ್ನು ಡಿಲೀಟ್ ಮಾಡಬಹುದು.
ಇದು ಆಪ್ಶನಲ್ ಎಂದು ಹೇಳಿದ್ದಾರೆ. ಈ ಅಪ್ಲಿಕೇಶನ್ ಅನ್ನು ಎಲ್ಲರಿಗೂ ಪರಿಚಯಿಸುವುದು ನಮ್ಮ ಕರ್ತವ್ಯ.
ಅದನ್ನು ಅವರ ಮೊಬೈಲ್ ಗಳಲ್ಲಿ ಇಟ್ಟುಕೊಳ್ಳುವುದು ಅಥವಾ ಡಿಲೀಟ್ ಮಾಡುವುದು ಬಳಕೆದಾರರಿಗೆ ಸಂಬಂಧಿಸಿದ್ದು ಎಂದು ಸಿಂಧಿಯಾ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.