ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಗುರುವಾರ ಸಂಜೆ ಭಾರತಕ್ಕೆ ಆಗಮಿಸಿದ್ದು, ಇಂದು ಹೈದರಾಬಾದ್ ಹೌಸ್ನಲ್ಲಿ ಪ್ರಧಾನಿ ಮೋದಿಯವರ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದರು.
ಈ ವೇಳೆ, ಉಕ್ರೇನ್ ಸಂಘರ್ಷವನ್ನು ಉಲ್ಲೇಖಿಸಿ ಮಾತನಾಡಿರುವ ಮೋದಿ, ಭಾರತ ಯಾವಾಗಲೂ ಶಾಂತಿಯನ್ನು ಬೆಂಬಲಿಸುತ್ತದೆ ಮತ್ತು ಶಾಂತಿಯ ಪರವಾಗಿ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.
ಇದೇ ವೇಳೆ ಮಾತನಾಡಿದ, ಪುಟಿನ್, "ಮೊದಲನೆಯದಾಗಿ, ನನ್ನನ್ನು ಆಹ್ವಾನಿಸಿದ್ದಕ್ಕಾಗಿ ತುಂಬಾ ಧನ್ಯವಾದಗಳು... ಉಕ್ರೇನ್‌ನಲ್ಲಿ ನಡೆಯುತ್ತಿರುವ ಘಟನೆಗಳ ಕುರಿತು ನಾನು ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಬಲ್ಲೆ.
ಶಾಂತಿ ಸ್ಥಾಪನೆಗೆ ಸಂಭಾವ್ಯ ಕ್ರಮಗಳ ಕುರಿತು ನಾವು ಯುಎಸ್ ಸೇರಿದಂತೆ ಕೆಲವು ಪಾಲುದಾರರೊಂದಿಗೆ ಒಟ್ಟಾಗಿ ಮಾತನಾಡುತ್ತಿದ್ದೇವೆ. ಈ ಪರಿಸ್ಥಿತಿಗೆ ಪರಿಹಾರಗಳನ್ನು ಕಂಡುಕೊಳ್ಳುವಲ್ಲಿ ಗಮನ ಹರಿಸಿದ್ದಕ್ಕಾಗಿ ಧನ್ಯವಾದಗಳು ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.