ಮಲಯಾಳಂ ಖ್ಯಾತ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಕೇರಳ ಕೋರ್ಟ್ ಖುಲಾಸೆಗೊಳಿಸಿದೆ.
ಪ್ರಮುಖ ಆರೋಪಿ ಪಲ್ಸರ್ ಸುನಿ ಸೇರಿದಂತೆ ಆರು ಆರೋಪಿಗಳು ದೋಷಿ ಎಂದು ಸೋಮವಾರ ತೀರ್ಪು ಪ್ರಕಟಿಸಿದೆ.
ತೀರ್ಪು ಬಂದ ನಂತರ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಲಯದ ಹೊರಗೆ ಮಾತನಾಡಿದ ನಟ ದಿಲೀಪ್, "ಇದು ನನ್ನ ವಿರುದ್ಧ ನಡೆದ ಪಿತೂರಿ" ಎಂದಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಬಿ ಸಂಧ್ಯಾ ಅವರು, ನಟ ದಿಲೀಪ್ ಅವರನ್ನು ಸೆಷನ್ಸ್ ನ್ಯಾಯಾಲಯ ಖುಲಾಸೆಗೊಳಿಸಿದ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದರು. ವಿಡಿಯೋ ಇಲ್ಲಿದೆ ನೋಡಿ.