ರಣವೀರ್ ಸಿಂಗ್, ಅಕ್ಷಯ್ ಖನ್ನಾ ಅಭಿನಯದ ಸ್ಪೈ ಥ್ರಿಲ್ಲರ್ 'ಧುರಂಧರ್' ಭಾರತದಲ್ಲಿ ಸಿನಿಪ್ರೇಮಿಗಳ ಮನಗೆದ್ದಿದೆ.
ಪಾಕಿಸ್ತಾನದಲ್ಲೂ ವೀಕ್ಷಕರು ಅಕ್ಷಯ್ ಖನ್ನಾ ಅವರ ಡ್ಯಾನ್ಸ್ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಆದರೆ ಚಿತ್ರದಲ್ಲಿ ಪ್ರಸ್ತುತಪಡಿಸಿದ ‘ವಾಸ್ತವ ವಿಷಯಗಳ’ ಕುರಿತು ಅನುಮನ ವ್ಯಕ್ತಪಡಿಸಿದ್ದಾರೆ.
ಚಿತ್ರದಲ್ಲಿ ಪಾಕಿಸ್ತಾನದ ವಿರೋಧಿ ಸಂದೇಶಗಳಿವೆ ಎಂಬ ಆಕ್ಷೇಪ ಕೇಳಿಬಂದಿದೆ.
6 ಗಲ್ಫ್ ರಾಷ್ಟ್ರಗಳಾದ ಬಹ್ರೇನ್, ಕುವೈತ್, ಓಮನ್, ಕತಾರ್, ಸೌದಿ ಅರೇಬಿಯಾ ಮತ್ತು ಯುಎಇಗಳಲ್ಲಿ ಚಿತ್ರ ಪ್ರದರ್ಶನಕ್ಕೆ ನಿರ್ಬಂಧ ಹೇರಲಾಗಿದೆ. ವಿಡಿಯೋ ವೈರಲ್ ಆಗಿದೆ.