ಮೈಸೂರು ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ, ಬಲೂನಿಗೆ ಹೀಲಿಯಂ ಗ್ಯಾಸ್ ತುಂಬುವ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸಾವಿಗೀಡಾಗಿದ್ದಾರೆ.
ಗುರುವಾರ ಸಂಜೆ ಸ್ಫೋಟ ಸಂಭವಿಸಿದ್ದು, ಬಲೂನು ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶದ ಕನೋಜ್ ಜಿಲ್ಲೆಯ ತೊಫಿಯ ಗ್ರಾಮದ ಸಲೀಂ (40) ಎಂಬಾತ ಸ್ಥಳದಲ್ಲೇ ಸಾವಿಗೀಡಾಗಿದ್ದು, ಐವರು ಗಾಯಗೊಂಡಿದ್ದಾರೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕೋಲ್ಕತ್ತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಅವರಿಗೆ ಗಾಯವಾಗಿದೆ. ಸದ್ಯ ಲಕ್ಷ್ಮಿ ಅವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.