ಕೋಗಿಲು ಬಡಾವಣೆಯಲ್ಲಿ ಅನಧಿಕೃತವಾಗಿ ನಿರ್ಮಿಸಿಕೊಂಡಿದ್ದ ಮನೆಗಳನ್ನು ಜಿಬಿಎ ತೆರವುಗೊಳಿಸಿದ ಜಾಗಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಕೇರಳ ಸಿಎಂ ರಾಜಕೀಯ ಮಾಡುತ್ತಿದ್ದಾರೆ. ಅವರು ಚುನಾವಣೆಯಲ್ಲಿ ಸೋಲಲಿದ್ದಾರೆ.
ಇದು ಸ್ಥಳೀಯ ವಿಷಯ. ಆರೋಗ್ಯದ ಅಪಾಯಗಳಿಂದ ಜನರ ಹಿತಾಸಕ್ತಿಗಳನ್ನು ನಾವು ರಕ್ಷಿಸಬೇಕು. ಸರ್ಕಾರಿ ಆಸ್ತಿಯನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವವರು ನಮಗೆ ಬೇಕಿಲ್ಲ.
ಬೆಂಗಳೂರಿನಲ್ಲಿ ಕೊಳೆಗೇರಿಗಳು ತಲೆ ಎತ್ತಬಾರದು ಎಂದು ನಾವು ಇಚ್ಛೆ. ಸರ್ಕಾರಿ ಆಸ್ತಿಯನ್ನು ರಕ್ಷಿಸುವುದು ನಮ್ಮ ಕರ್ತವ್ಯ, ಮತ್ತು ಅದನ್ನೇ ನಾವು ಮಾಡುತ್ತಿದ್ದೇವೆ... ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.