ಕೋಗಿಲು ಲೇಔಟ್ ನಲ್ಲಿ ಒತ್ತುವರಿ ಮಾಡಿದವರಿಗೆ ಗಿಫ್ಟ್ ಕೊಡುವುದಕ್ಕೆ ನಾವು ತಯಾರಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಮಂಗಳವಾರ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಸ್ಲಿಂಮರ ಓಲೈಕೆ ಮಾಡಲಾಗುತ್ತಿದೆ ಎನ್ನುವ ಪ್ರತಿಪಕ್ಷದ ಟೀಕೆಗಳ ಬಗ್ಗೆ ಕೇಳಿದಾಗ, ಯಾರನ್ನೂ ಓಲೈಕೆ ಮಾಡುತ್ತಿಲ್ಲ.
ಒತ್ತುವರಿಗೆ ಕಾರಣರಾದವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಕೆಲವರು ಹಣ ಸಂಗ್ರಹಿಸಿದ್ದಾರೆ ಎಂದು ಅಲ್ಲಿನವರೇ ಹೇಳಿಕೆ ನೀಡಿದ್ದಾರೆ.
ಮಾನವೀಯತೆ ದೃಷ್ಟಿಯಿಂದ ಯಾರಿಗೆ ಅರ್ಹತೆ ಇದೆಯೋ ಅವರಿಗೆ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಮನೆ ನೀಡಲಾಗುವುದು ಎಂದರು. ವಿಡಿಯೋ ಇಲ್ಲಿದೆ ನೋಡಿ.