ವೀಕೆಂಡ್ (2019) ಚಿತ್ರದಲ್ಲಿ ಅನಂತ್ ನಾಗ್ ಅವರೊಂದಿಗೆ ಚೊಚ್ಚಲ ಪ್ರವೇಶ ಮಾಡಿದ ನಟ ಮಿಲಿಂದ್, ಅನ್‌ಲಾಕ್ ರಾಘವ ಚಿತ್ರದಲ್ಲಿ ಪೂರ್ಣಪ್ರಮಾಣದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದಾರೆ.
ಸಿನಿಮಾ ಬಗ್ಗೆ ನಟ ಮಿಲಿಂದ್ Kannadaprabha.com ಗೆ ನೀಡಿದ ಸಂದರ್ಶನದಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಮಂಜುನಾಥ್ ಡಿ ಮತ್ತು ಗಿರೀಶ್ ಕುಮಾರ್ ನಿರ್ಮಿಸಿರುವ ಅನ್‌ಲಾಕ್ ರಾಘವ ಚಿತ್ರಕ್ಕೆ ಅನೂಪ್ ಸೀಳಿನ್ ಸಂಗೀತ ಮತ್ತು ಲವಿತ್ ಅವರ ಛಾಯಾಗ್ರಹಣವಿದೆ.