ಉತ್ತರಾಖಂಡದ ಚಮೋಲಿ ಜಿಲ್ಲೆಯ ಮಾನಾ ಬಳಿ ಶುಕ್ರವಾರ ಸಂಭವಿಸಿದ ಹಿಮಪಾತದಲ್ಲಿ ಗಡಿ ರಸ್ತೆಗಳ ಸಂಘಟನೆಯ (ಬಿಆರ್‌ಒ) ಕನಿಷ್ಠ 25 ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ದುರಂತ ಸಂಭವಿಸಿದಾಗ ಸುಮಾರು 57 ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಾರ್ಮಿಕರು ಬಿಆರ್‌ಒಗೆ ಸಂಬಂಧಿಸಿದ ಗುತ್ತಿಗೆದಾರರು ಎನ್ನಲಾಗಿದೆ.
ಇಲ್ಲಿಯವರೆಗೆ, 32 ಜನರನ್ನು ರಕ್ಷಿಸಲಾಗಿದೆ ಮತ್ತು ಅವರನ್ನು ಮಾನಾ ಬಳಿಯ ಸೇನಾ ಶಿಬಿರಕ್ಕೆ ಕಳುಹಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.