ಸರ್ಕಾರಿ ಬಸ್ ದರ ಏರಿಕೆ ವಿರೋಧಿಸಿ ಕರ್ನಾಟಕ ಬಿಜೆಪಿ ಶುಕ್ರವಾರ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿತು.
ಮೆಜೆಸ್ಟಿಕ್‌ನಲ್ಲಿರುವ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಧರಣಿ ನಡೆಸಿದರು.
ಹೆಚ್ಚುವರಿ ಹೊರೆಯಿಂದ ಕಂಗಾಲಾಗಿರುವ ಪ್ರಯಾಣಿಕರಿಗೆ ಹೂ ನೀಡಿ ಸಮಾಧಾನ ಪಡಿಸುತ್ತಿದ್ದೇವೆ ಎಂದು ಪಕ್ಷದ ಮುಖಂಡರು ಈ ವೇಳೆ ತಿಳಿಸಿದರು.
ರಾಜ್ಯ ಸಚಿವ ಸಂಪುಟ ಗುರುವಾರ ಎಲ್ಲಾ ನಿಗಮಗಳ ಸರ್ಕಾರಿ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ನಿರ್ಧರಿಸಿದೆ. ಇದು ಭಾನುವಾರದಿಂದಲೇ ಜಾರಿಗೆ ಬರಲಿದೆ. ವಿಡಿಯೋ ಇಲ್ಲಿದೆ ನೋಡಿ.