ಕರ್ನಾಟಕ ಜನತೆ ಇನ್ನು ಮುಂದೆ ಅಮೆರಿಕಾ ವೀಸಕ್ಕಾಗಿ ಬೇರೆ ರಾಜ್ಯಗಳಿಗೆ ಹೋಗಬೇಕಾಗಿಲ್ಲ. ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕಾ ಕನ್ಸುಲೇಟ್ ಕಚೇರಿ ಶುಕ್ರವಾರ ಉದ್ಘಾಟನೆಯಾಗಿದೆ.
ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್, ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಎಂಬಿ ಪಾಟೀಲ್, ಸಚಿವ ಪ್ರಿಯಾಂಕ್ ಖರ್ಗೆ, ಸಂಸದ ತೇಜಸ್ವಿ ಸೂರ್ಯ, ಸಂಸದ ಡಾ ಮಂಜುನಾಥ್ ಮತ್ತು ಅಮೆರಿಕಾ ರಾಯಭಾರಿ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ಅಮೆರಿಕ ಕನ್ಸುಲೇಟ್ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಜೈಶಂಕರ್, ಇದು ಅನೇಕರಿಗೆ ಪ್ರಯಾಣ ಮತ್ತು ವೀಸಾ ಪ್ರಕ್ರಿಯೆಗಳನ್ನು ಸುಲಭಗೊಳಿಸುತ್ತದೆ.
ಈ ಬಹುನಿರೀಕ್ಷಿತ ಬೆಳವಣಿಗೆಯು ಬೆಂಗಳೂರಿನ ಟೆಕ್ ಸಮುದಾಯದೊಂದಿಗೆ ಸಹಯೋಗವನ್ನು ಹೆಚ್ಚಿಸಲು ಭರವಸೆ ನೀಡುತ್ತದೆ ಎಂದರು. ವಿಡಿಯೋ ಇಲ್ಲಿದೆ ನೋಡಿ.