ನಾಯಕತ್ವ ಬದಲಾವಣೆ ಕುರಿತು ಯಾವುದೇ ಅಭಿಪ್ರಾಯ ಸಂಗ್ರಹಿಸುವ ಸಾಧ್ಯತೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಪಕ್ಷದ ಕರ್ನಾಟಕ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮಂಗಳವಾರ ತಳ್ಳಿಹಾಕಿದ್ದಾರೆ.
ಕಾಂಗ್ರೆಸ್ ಶಾಸಕರು ಮತ್ತು ಸಂಸದರ ಸ್ವಂತ ಕ್ಷೇತ್ರಗಳಲ್ಲಿ ಆಗಿರುವ ಕೆಲಸಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಭೇಟಿಯಾಗುತ್ತಿದ್ದೇನೆ ಎಂದು ಸುರ್ಜೇವಾಲಾ ವಿವರಿಸಿದರು.
'ಕೆಲವರು ನಾಯಕತ್ವ ಬದಲಾವಣೆಯ ಬಗ್ಗೆ ಶಾಸಕರು ಮತ್ತು ಸಂಸದರ ಅಭಿಪ್ರಾಯ ಸಂಗ್ರಹಿಸುತ್ತಿದ್ದೀರಾ ಎಂದು ನನ್ನನ್ನು ಕೇಳಿದರು.
ನಿನ್ನೆಯೂ ನಾನು ನೀಡಿದ್ದ ಉತ್ತರವನ್ನೇ ಇಂದು ಮತ್ತೆ ಹೇಳುತ್ತಿದ್ದೇನೆ. ಒಂದೇ ಪದದಲ್ಲಿ ಹೇಳುವುದಾದರೆ ಸ್ಪಷ್ಟವಾಗಿ 'ಇಲ್ಲ' ಎಂದು ಅವರು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.