ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಸಾವು-ನೋವಿನ ನಡುವೆ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಭಾರತೀಯ ಸೇನೆಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.
ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದೆ, ಭಾರತೀಯ ಸೇನೆಯ ವೈದ್ಯ ಮೇಜರ್ ಡಾ.ರೋಹಿತ್ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ಆಕೆಯ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.