ಭಾರತೀಯ ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಅದನ್ನು ಸರಿಪಡಿಸುವ ಅಗತ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಶನಿವಾರ ಹೇಳಿದರು.
ಹೈದರಾಬಾದ್‌ನ ಜಸ್ಟೀಸ್ ಸಿಟಿಯಲ್ಲಿರುವ ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವದಲ್ಲಿ ನ್ಯಾಯಮೂರ್ತಿ ಗವಾಯಿ ಭಾಷಣ ಮಾಡಿದರು.
ವಿದ್ಯಾರ್ಥಿಗಳು ಸ್ಕಾಲರ್ಷಿಪ್ ಮೇಲೆ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕು, ಕುಟುಂಬದ ಹಣಕಾಸಿನ ಮೇಲೆ ಒತ್ತಡ ಹೇರಬಾರದು ಎಂದು ಸಲಹೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.