ಉತ್ತರ ಕನ್ನಡದ ಗೋಕರ್ಣದ ರಾಮತೀರ್ಥದ ಅರಣ್ಯದ ಗುಹೆಯಲ್ಲಿ ಸಣ್ಣ ಸಣ್ಣ ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾದ ಮಹಿಳೆಯನ್ನು ಗಸ್ತು ತಿರುಗುತ್ತಿದ್ದ ಗೋಕರ್ಣ ಪೊಲೀಸರು ರಕ್ಷಿಸಿದ್ದಾರೆ. ಈ ಮಹಿಳೆ ಗೋವಾ ಮೂಲಕ ಗೋಕರ್ಣಕ್ಕೆ ಬಂದು ದಟ್ಟ ಅರಣ್ಯವಾದ ರಾಮತೀರ್ಥ ಬಳಿಯ ಗುಹೆಯಲ್ಲಿ ತನ್ನ ಮಕ್ಕಳೊಂದಿಗೆ ವಾಸವಿದ್ದಳು.