ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾದೇವಿ, ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು. ಅವರು ಬೆಂಗಳೂರಿನಲ್ಲಿ ಹುಟ್ಟಿದರು. ತಂದೆ ಬೈರಪ್ಪ ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ.
ಬಿ.ಸರೋಜಾದೇವಿ ಅವರು ಕನ್ನಡ ಚಿತ್ರರಂಗದ ಪ್ರಮುಖ ನಟಿ. ಅವರನ್ನು ‘ಅಭಿನಯ ಸರಸ್ವತಿ’ ಎಂದು ಕರೆಯಲಾಗುತ್ತಿತ್ತು.
ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ಹೆಸರುವಾಸಿಯಾಗಿದ್ದರು.
ಅವರು 1955 ರಿಂದ 1984 ರವರೆಗೆ ಸತತವಾಗಿ 161 ಚಿತ್ರಗಳಲ್ಲಿ ನಾಯಕಿಯಾಗಿ ನಟಿಸಿದ್ದರು. ದೃಶ್ಯಗಳ ವಿಡಿಯೋ ಇಲ್ಲಿದೆ ನೋಡಿ.