ಪೂರ್ವ ಇರಾಕ್‌ನ ವಾಸಿತ್ ಪ್ರಾಂತ್ಯದಲ್ಲಿ ಹೊಸದಾಗಿ ತೆರೆಯಲಾದ ಮಾಲ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 60 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಕುಟ್ ನಗರದಲ್ಲಿ ಬುಧವಾರ ತಡರಾತ್ರಿ ಸಂಭವಿಸಿದ ದುರಂತದಲ್ಲಿ ಹೆಚ್ಚಿನವರು ಉಸಿರುಗಟ್ಟುವಿಕೆಯಿಂದ ಸಾವನ್ನಪ್ಪಿದ್ದಾರೆ ಎಂದು ಇರಾಕ್‌ನ ಆಂತರಿಕ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.
ಕಟ್ಟಡದೊಳಗೆ ಸಿಲುಕಿದ್ದ 45 ಕ್ಕೂ ಹೆಚ್ಚು ಜನರನ್ನು ನಾಗರಿಕ ರಕ್ಷಣಾ ತಂಡಗಳು ರಕ್ಷಿಸುವಲ್ಲಿ ಯಶಸ್ವಿಯಾದವು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.